ಇಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಜಿಬೈಲಿನಲ್ಲಿ ಆಹಾರಮೇಳ ನಡೆಯಿತು.ಈ ಕಾರ್ಯಕ್ರಮದಲ್ಲಿ ವಿವಿಧ ಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳು ಮತ್ತು ಇತರ ತಿಂಡಿ ತಿನಿಸುಗಳನ್ನು ಪ್ರದರ್ಶಿಸಲಾಯಿತು. 50ಕ್ಕಿಂತಲೂ ಹೆಚ್ಚಿನ ಆಹಾರ ತಿನಿಸುಗಳನ್ನು ಪ್ರದರ್ಶಿಸಲಾಯಿತು.ಎಲ್ಲಾ ಮಕ್ಕಳ ಹೆತ್ತವರು ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ತಂದು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದರು. ಮಜಿಬೈಲ್ ವಾರ್ಡ್ ಸದಸ್ಯ ಶ್ರೀಮತಿ ಆಶಾಲತಾ ಬಿ. ಎಂ ಈ ಕಾರ್ಯಕ್ರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ ಬಂಗೇರ ಸರ್ ಅವರು ಉತ್ತಮ ಆರೋಗ್ಯಕ್ಕಾಗಿ ನಾವು ಸೇವಿಸಬೇಕಾದ ಆಹಾರದ ಪ್ರಾಮುಖ್ಯತೆಯನ್ನು ತಿಳಿಸಿದರು. ಶಾಲಾ ಸಿಬ್ಬಂದಿ ವರ್ಗದವರು ಸಂಪೂರ್ಣ ಸಹಕಾರ ನೀಡಿದರು.
ಆಹಾರಮೇಳದ ಉದ್ಘಾಟನೆ ವಾರ್ಡ್ ಮೆಂಬರ್ ಶ್ರೀಮತಿ ಆಶಾಲತಾ ಬಿ ಎಂ ಅವರಿಂದ |
No comments:
Post a Comment